ಹ್ಯಾಟ್ರಿಕ್ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿದ್ದಾರೆ ಬಿಜೆಪಿ ಅಭ್ಯರ್ಥಿ

First Published 6, Mar 2018, 1:44 PM IST
BJP SR Vishwanath Contest From Yalahanka
Highlights

ಹಾಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹಾಟ್ರಿಕ್ ನಿರೀಕ್ಷೆಯೊಂದಿಗೆ ಮತ್ತೆ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ. ಕಾಂಗ್ರೆಸ್‌ನಿಂದ ಎಂಎಲ್ಸಿ ಎಂ. ನಾರಾಯಣಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಯಲಹಂಕ : ಹಾಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹಾಟ್ರಿಕ್ ನಿರೀಕ್ಷೆಯೊಂದಿಗೆ ಮತ್ತೆ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ. ಕಾಂಗ್ರೆಸ್‌ನಿಂದ ಎಂಎಲ್ಸಿ ಎಂ. ನಾರಾಯಣಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಸೆ ಮೇರೆಗೆ ನಾರಾಯಣಸ್ವಾಮಿ ಕಣಕ್ಕೆ ಇಳಿಯಲು ಬಯಸಿದ್ದಾರೆ. ಇನ್ನು ಕೆಪಿಸಿಸಿ ಕಾರ್ಯದರ್ಶಿ ಕೇಶವರಾಜಣ್ಣ ಸ್ವ ಪ್ರಯತ್ನದಿಂದ ಟಿಕೆಟ್‌ಗಾಗಿ ಪ್ರಯತ್ನಿಸಿದ್ದರೆ, ವೀರಪ್ಪ ಮೊಯ್ಲಿ ಅವರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದಾರೆ.

ಜೆಡಿಎಸ್‌ನಿಂದ ವಿಧಾನಪರಿಷತ್ತಿನ ಸದಸ್ಯರಾಗಿದ್ದ ‘ಮುಂಗಾರು ಮಳೆ’ ಚಿತ್ರದ ಖ್ಯಾತಿಯ ಇ.ಕೃಷ್ಣಪ್ಪ ಅವರು ಮತ್ತೊಮ್ಮೆ ಕಣಕ್ಕಿಳಿಯುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.

loader