ರಾಮ್ ಮಾಧವ್'ರನ್ನು ಉಸ್ತುವಾರಿಯಾಗಿ ನೇಮಿಸುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಬೆಂಗಳೂರು(ಆ.14): ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಆರ್'ಎಸ್ಎಸ್ ಹಾಗೂ ಬಿಜೆಪಿ ನಡುವೆ ಸಮನ್ವಯ ತರುವ ಉದ್ದೇಶದಿಂದ ಕೇಶವಕೃಪಗೆ ಭೇಟಿ ನೀಡಲಿದ್ದಾರೆ.
ರಾಮ್ ಮಾಧವ್'ರನ್ನು ಉಸ್ತುವಾರಿಯಾಗಿ ನೇಮಿಸುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕೆ.ಸಿ. ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಬಂದ ಬಳಿಕ ಕಾಂಗ್ರೆಸ್ ನಾಯಕರು ಚುರುಕಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿಗೂ ಡೈನಾಮಿಕ್ ಉಸ್ತುವಾರಿ ಬೇಕು ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ರಾಮ್ ಲಾಲ್ ಅಥವಾ ರಾಮ್ ಮಾಧವ್ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಿಸುವ ಬಗ್ಗೆ ಕೂಡಾ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.
