ದೇಸಾಯಿ ವಿರುದ್ಧ ಸೀಮಾ ಬಂಡಾಯ

First Published 12, Apr 2018, 8:49 AM IST
BJP Ticket For Amrutha Desai
Highlights

ತಮಗೆ ಬಿಜೆಪಿ ಟಿಕೆಟ್‌ ಸಿಗದೇ ಅಮೃತ ದೇಸಾಯಿ ಅವರಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆಯಲ್ಲಿ ‘ತೀವ್ರ ನೊಂದಿರುವ’ ಮಾಜಿ ಶಾಸಕಿ ಸೀಮಾ ಮಸೂತಿ ಅವರು ಧಾರವಾಡ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.

ಧಾರವಾಡ: ತಮಗೆ ಬಿಜೆಪಿ ಟಿಕೆಟ್‌ ಸಿಗದೇ ಅಮೃತ ದೇಸಾಯಿ ಅವರಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆಯಲ್ಲಿ ‘ತೀವ್ರ ನೊಂದಿರುವ’ ಮಾಜಿ ಶಾಸಕಿ ಸೀಮಾ ಮಸೂತಿ ಅವರು ಧಾರವಾಡ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.

ಸಂಸದ ಪ್ರಹ್ಲಾದ ಜೋಶಿ ಸೇರಿ ಹಲವರ ಮನವೊಲಿಕೆ ಯತ್ನ ವಿಫಲವಾದ ಬೆನ್ನಲ್ಲೇ ಬುಧವಾರ ಸಂಜೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಎರಡು ದಶಕಗಳಿಂದ ಮಾಡಿದ ಕೆಲಸಕ್ಕೆ ಬೆಲೆ ಇಲ್ಲದಂತೆ ಮತ್ತೊಬ್ಬರಿಗೆ ಟಿಕೆಟ್‌ ನೀಡಿರುವುದ್ದು ಅಸಮಾಧಾನ ತಂದಿದೆ. ನೂರಾರು ಕಾರ್ಯಕರ್ತರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಏ.19ರಿಂದ 22ರೊಳಗೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೇ ಬಂದು ಮನವೊಲಿಸಿದರೂ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದರು.

loader