ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾಧ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. 

ಬೆಂಗಳೂರು [ಜು.09] : ಮೈತ್ರಿ ಸರ್ಕಾರ ಅತಂತ್ರ ಸ್ಥಿತಿಗೆ ಸಿಲುಕಿರುವ ಹಿನ್ನೆಲೆ ಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಡಳಿತಾರೂಢ ಪಕ್ಷದ ಶಾಸಕರು ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಸಭೆಯ ನಂತರ ವಿವರ ನೀಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ, ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿರುವ ಸಮಯದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಬಿಜೆಪಿಯನ್ನು ದೂರುತ್ತಿದೆಯೇ ಹೊರತು ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ ಎಂದು ದೂರಿದ್ದಾರೆ.