ಮೈಸೂರು [ಜು.04]  : ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿರುವುದು ಸತ್ಯ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಕೋಟಿ ಕೋಟಿ ಆಫರ್ ಮಾಡಿರುವುದು ನಿಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಪಿರಿಯಾಪಟ್ಟಣ ಶಾಸಕ ಮಹದೇವು ತಮಗೆ ಬಿಜೆಪಿ 30 ಕೋಟಿ ರು. ನೀಡಲು ಬಂದಿದ್ದಾಗಿ ಹೇಳಿದ್ದಾರೆ.ಮಹದೇವು ಅವರ ವಿಚಾರ ನನಗೆ ಸರಿಯಾಗಿ ಗೊತ್ತಿಲ್ಲ. ಆದರೆ ಆಪರೇಷನ್ ನಡೆಯುತ್ತಿದೆ ಎಂದರು. 

ನಮ್ಮ ಶಾಸಕರನ್ನು ದುಡ್ಡು ಕೊಟ್ಟು ಖರೀದಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಏನೇ ಆದರೂ ಕೂಡ ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.  ಕಲ್ಲು ಬಂಡೆಯಂತೆ ಗಟ್ಟಿಯಾಗಿ ಇರಲಿದೆ ಎಂದು ಮೈಸೂರಿನಲ್ಲಿ ಹೇಳಿದರು.