ತ್ರಿಪುರದಲ್ಲಿ ಅಧಿಕಾರದ ಗದ್ದುಗೆ ಏರುವಲ್ಲಿ ಸಫಲವಾಗಿರುವ ಬಿಜೆಪಿ ಮತ್ತು ಐಪಿಎಫ್‌ಟಿ ಮೈತ್ರಿಕೂಟ, ತನ್ನ ಶಾಸಕಾಂಗ ಪಕ್ಷದ ನೂತನ ಆಯ್ಕೆ ಮಾಡಲು ಏ.6ರಂದು ಇಲ್ಲಿ ಸಭೆ ಸೇರಲಿದೆ.

ಅಗರ್ತಲಾ: ತ್ರಿಪುರದಲ್ಲಿ ಅಧಿಕಾರದ ಗದ್ದುಗೆ ಏರುವಲ್ಲಿ ಸಫಲವಾಗಿರುವ ಬಿಜೆಪಿ ಮತ್ತು ಐಪಿಎಫ್‌ಟಿ ಮೈತ್ರಿಕೂಟ, ತನ್ನ ಶಾಸಕಾಂಗ ಪಕ್ಷದ ನೂತನ ಆಯ್ಕೆ ಮಾಡಲು ಏ.6ರಂದು ಇಲ್ಲಿ ಸಭೆ ಸೇರಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಈ ಸಭೆಯ ವೀಕ್ಷಕರಾಗಿ ಆಗಮಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ ಬಿಪ್ಲಬ್‌ ದೇಬ್‌ ಅವರು ಭಾನುವಾರ ಈ ವಿಷಯ ಪ್ರಕಟಿಸಿದರು.

60 ಸದಸ್ಯಬಲದ ತ್ರಿಪುರ ವಿಧಾನಸಭೆಗೆ ನಡೆದ ಚುನಾವಣೆ ವೇಳೆ ಬಿಜೆಪಿಯ 35 ಮತ್ತು ಐಪಿಎಫ್‌ಟಿಯ 8 ಶಾಸಕರು ಆಯ್ಕೆಯಾಗಿದ್ದರು.

ಸದ್ಯದ ಲೆಕ್ಕಾಚಾರದ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷ ಬಿಪ್ಲಬ್‌ ದೇವ್‌ ಅವರೇ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಸಿಪಿಎಂ ಅಭ್ಯರ್ಥಿಯೊಬ್ಬರ ನಿಧನದಿಂದಾಗಿ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆದಿರಲಿಲ್ಲ.