ಗೋವಾ ಹಾಗೂ ಮಣಿಪುರದಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ಸನ್ನು ಬದಿಗೊತ್ತಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಕೇಸರಿ ಪಕ್ಷವು ಹಣದ ಪ್ರಭಾವವನ್ನು ಬಳಸಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ನವದೆಹಲಿ (ಮಾ.14): ಗೋವಾ ಹಾಗೂ ಮಣಿಪುರದಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ಸನ್ನು ಬದಿಗೊತ್ತಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಕೇಸರಿ ಪಕ್ಷವು ಹಣದ ಪ್ರಭಾವವನ್ನು ಬಳಸಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ನಾವು ಪ್ರತಿಪಕ್ಷ ಸ್ಥಾನದಲ್ಲಿದ್ದೇವೆ. ಉತ್ತರ ಪ್ರದೇಶ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಬಿಜೆಪಿಯೊಂದಿಗಿನ ಸೈದ್ಧಾಂತಿಕ ಸಂಘರ್ಷವನ್ನು ಮುಂದುವರೆಸುತ್ತೇವೆ. ಪಂಚರಾಜ್ಯ ಚುನಾವಣೆಯಲ್ಲಿ 2 ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಪ್ರಜಾಪ್ರಭುತ್ವವು ಅವರಿಂದ ದುರ್ಬಲಗೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
