ಬೆಂಗಳೂರು ಬಿಎಸ್‌ಪಿ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಆಕ್ರೋಶ
ಬೆಂಗಳೂರು: ಹಿಂದುತ್ವ ಅಜೆಂಡಾದಡಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಮೀಸಲಾತಿಯನ್ನು ನಿಷ್ಫಲಗೊಳಿಸುವ ನಿಟ್ಟಿನಲ್ಲಿ ಸರ್ಕಾರಿ ವಲಯವನ್ನು ಖಾಸಗೀಕರಣ ಮಾಡುವ ಷಡ್ಯಂತ್ರ ರೂಪಿಸಿದೆ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಆರೋಪಿಸಿದ್ದಾರೆ.
ನಗರದ ಸೆಂಟ್ರಲ್ ಕಾಲೇಜಿನ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ದಕ್ಷಿಣ ಭಾರತದ ಬಿಎಸ್ಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ದಲಿತರಿಗೆ, ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ಮತ್ತು ಬಿಜೆಪಿಗೆ ಆಸಕ್ತಿ ಇಲ್ಲವಾಗಿದೆ. ಮೀಸಲಾತಿ ವ್ಯವಸ್ಥೆಯನ್ನು ಸದ್ದಿಲ್ಲದೆ ಮೂಲೆಗುಂಪು ಮಾಡುವ ಹುನ್ನಾರ ನಡೆಸಿವೆ.
ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಇಲ್ಲದಿರುವುದರಿಂದ ಎಂದರು. ‘ಲೋಕಸಭೆ ಚುನಾವಣೆಯು ನಿಗದಿತ ಅವಧಿಗಿಂತ ಮುನ್ನ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ದೇಶದ ಜನತೆಯನ್ನು ಬಡಿದೆಬ್ಬಿಸುವ ಕೆಲಸ ಮಾಡಬೇಕು. ಚುನಾವಣಾ ಸಮರಕ್ಕೆ ಸಜ್ಜಾಗಿ ಕೇಂದ್ರದ ವಿರುದ್ಧ ಜನ ಜಾಗೃತಿ ಮೂಡಿಸಬೇಕು’ ಎಂದು ಅವರು ಕರೆ ನೀಡಿದರು.
ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಸಮಾರಂಭದಲ್ಲಿ ಬಿಎಸ್ಪಿ ರಾಜ್ಯ ಉಸ್ತುವಾರಿ ಡಾ.ಅಶೋಕ್ ಸಿದ್ದಾರ್ಥ, ಮಾಯಾವತಿ ಸಹೋದರ ಆನಂದ್ ಕುಮಾರ್, ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ, ರಾಜ್ಯಾಧ್ಯಕ್ಷ ಎನ್.ಮಹೇಶ್ ಮತ್ತಿತರರಿದ್ದರು.
