ಬೆಂಗಳೂರು [ಜು.17] : ಕರ್ನಾಟಕ ರಾಜಕೀಯ ಪ್ರಹಸನದ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಪ್ರಕಟವಾದ ಮಹತ್ವದ ತೀರ್ಪನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸ್ವಾಗತಿಸಿದ್ದಾರೆ. 

ವಿಶ್ವಾಸಮತಕ್ಕೆ ಆಗಮಿಸಲು ಅತೃಪ್ತರಿಗೆ ಒತ್ತಡ ಹೇರಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಸದನದಲ್ಲಿ ಬಿಜೆಪಿ ಬಹುಮತ ಹೊಂದಲು ಅವಕಾಶ ಇದೆ ಎಂದು ಪೂಜಾರಿ ಹೇಳಿದ್ದಾರೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೈತ್ರಿ ಸರ್ಕಾರದ ಸಚಿವರು ಅತೃಪ್ತ ಶಾಸಕರನ್ನು ಅನರ್ಹ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ರೀತಿಯಾಗಿ ಒತ್ತಡ ಹೇರುವುದು ಸಚಿವ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು. 

ಮೈತ್ರಿ ಸರ್ಕಾರ ಪತನದ ಅಂಚಿನಲ್ಲಿ ಇದ್ದು, ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.