ಲೋಕಾಯುಕ್ತವನ್ನು ದುರ್ಬಲಗೊಳಿಸಿ ಎಸಿಬಿಯನ್ನು ರಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಸಿಬಿ ರದ್ದುಗೊಳಿಸುವ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ: ಲೋಕಾಯುಕ್ತವನ್ನು ದುರ್ಬಲಗೊಳಿಸಿ ಎಸಿಬಿಯನ್ನು ರಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಸಿಬಿ ರದ್ದುಗೊಳಿಸುವ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟರಿಗೆ ಸಿಂಹಸ್ವಪ್ನವಾಗಬೇಕಿದ್ದ ಎಸಿಬಿ, ಭ್ರಷ್ಟರ ರಕ್ಷಣೆಗೆ ಬಳಕೆಯಾಗುತ್ತಿದೆ ಎಂದರು. ಸಿದ್ದರಾಮಯ್ಯ ಅವರು ಲೋಕಾಯುಕ್ತವನ್ನು ದುರ್ಬಲಗೊಳಿಸಿ ಎಸಿಬಿ ರಚಿಸಿದಾಗಿನಿಂದ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಹೇಳಿದರು.