ಚಿತ್ರದುರ್ಗ (ಸೆ.22): ಕಾವೇರಿ ವಿಚಾರವಾಗಿ ನಾಳೆ ನಡೆಯಲಿರುವ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಬಿಜೆಪಿ ಪಾಲ್ಗೊಳಲ್ಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ ನೀರು ಹರಿಸದಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ ಕಾವೇರಿ ನದಿ ನೀರು ಹರಿಸುವ ಬಗ್ಗೆ ಸ್ಪಷ್ಟ ನಿಲುವು ಹೊಂದಿರಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆ ಇಲ್ಲವೋ ಎಂದು ಚರ್ಚಿಸಲು ರಾಜ್ಯ ಸರ್ಕಾರ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಕರೆದಿದೆ.