ಬೆಂಗಳೂರು :  ಮುಂದಿನ ಲೋಕಸಭೆ ಚುನಾವಣೆ ಯಲ್ಲಿ 22 - 23 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಎಲ್ಲಾ 28 ಕ್ಷೇತ್ರ ದಲ್ಲಿಯೂ ಬಿಜೆಪಿಯ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. 

ಅಭ್ಯರ್ಥಿ ಆಯ್ಕೆಗೆ ಪಕ್ಷದ ಮಾನದಂಡ ಅನುಸರಿಸಲಾಗು ತ್ತದೆ. ಅಭ್ಯರ್ಥಿಗಳ ಕ್ಷೇತ್ರ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ. ಅಧಿವೇಶನದ ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. 

ಪುತ್ರ ಬಿ.ವೈ.ವಿಜಯೇಂದ್ರ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಪಕ್ಷದ ಪರ ಪ್ರಚಾರ ಕೈಗೊಳ್ಳಲಿದ್ದಾರೆಯೇ ಹೊರತು ಯಾವುದೇ ಕಾರಣಕ್ಕೂ  ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.