ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಟಾರ್ಗೆಟ್

BJP Win 50 pc of Loksabha Seat  Amit Shah sets target
Highlights

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರಿಗೆ ಟಾರ್ಗೆಟ್ ಸೆಟ್ ಮಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶೇ.50ರಷ್ಟು ಸೀಟುಗಳಲ್ಲಿ ಗೆಲುವು ಪಡೆದೇ ತೀರಬೇಕು ಎಂದು ಪಶ್ಚಿಮ ಬಂಗಾಳದ ಪ್ರವಾಸದ ವೇಳೆ ಸೂಚನೆ ನೀಡಿದ್ದಾರೆ. 

ಕೋಲ್ಕತಾ : ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ಆರಂಭವಾಗಿದ್ದು, ವಿವಿಧ ಪಕ್ಷಗಳು ಗೆಲುವಿಗಾಗಿ ಹೋರಾಟ ಪ್ರಾರಂಭ ಮಾಡಿವೆ. ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಈಗಾಗಲೇ ಕಾರ್ಯ ಪೃವೃತ್ತರಾಗಿದ್ದು,  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ. 

2 ದಿನಗಳ ಕಾಲ  ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿರುವ ಅವರು ಇಲ್ಲಿ 42 ಲೋಕಸಭಾ ಸ್ಥಾನಗಳಲ್ಲಿ ಅರ್ಧದಷ್ಟು ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಬೇಕು ಎಂದು ರಾಜ್ಯ ರಾಜಕೀಯ ನಾಯಕರಿಗೆ ಟಾರ್ಗೆಟ್ ನೀಡಿದ್ದಾರೆ. 

ಬುಧವಾರ ಮಧ್ಯಾಹ್ನದ ವೇಳೆ ಪಶ್ಚಿಮ ಬಂಗಾಳಕ್ಕೆ ತೆರಳಿರುವ ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ದಿಲೀಪ್ ಘೋಷ್  ಸೇರಿದಂತೆ ಅನೇಕ ಮುಖಂಡರನ್ನು  ಭೇಟಿ ಮಾಡಿದ್ದಾರೆ. ಇನ್ನು ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದ ಅವರು 2019ರ ಲೋಕಸಭಾ ಚುನಾವಣೆಯಲ್ಲಿ  21 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲೇ ಬೇಕು ಎನ್ನುವ ಗುರಿ ನೀಡಿದ್ದಾರೆ.  ಅಲ್ಲದೇ ಬಿಜೆಪಿ ದುರ್ಬಲವಾಗಿರುವ ಪ್ರದೇಶಗಳಲ್ಲಿಯೂ ಕೂಡ ಬಲಪಡಿಸುವ ಪ್ರಯತ್ನದ ಬಗ್ಗೆ ಚರ್ಚೆ ನಡೆಸಿದ್ದಾರೆ. 

loader