Asianet Suvarna News Asianet Suvarna News

ಬಿಜೆಪಿಗೆ ಭರ್ಜರಿ ಜಯಭೇರಿ : ಮತ್ತೆ ಮರುಜೀವ

ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದ ಬಿಜೆಪಿಗೆ ಕೊಂಚ ರಿಲೀಫ್ ಸಿಕ್ಕಿದೆ. ತ್ರಿಪುರ ಸ್ಥಳೀಯ ಸಂಸ್ಥೆ ಉಪ ಚುನಾವಣೆಯಲ್ಲಿ 158 ರಲ್ಲಿ 157 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. 

BJP Wins 157 of 158 Seats In Tripura Local Bodies Bypoll
Author
Bengaluru, First Published Dec 29, 2018, 12:40 PM IST

ಅಗರ್ತಲಾ : ಇತ್ತೀಚೆಗಷ್ಟೇ ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಸೋಲನ್ನು ಕಂಡ ಬಿಜೆಪಿಗೆ ಕೊಂಚ ಮರು ಜೀವ ಬಂದಂತಾಗಿದೆ.  

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ತ್ರಿಪುರ ಸ್ಥಳೀಯ ಸಂಸ್ಥೆ ಉಪ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸುವ ಮೂಲಕ ಬಿಜೆಪಿಯಲ್ಲಿ ಮತ್ತೆ ಜಯದ ಸ್ಫೂರ್ತಿ ಮರುಕಳಿಸಿದೆ. ಕಳೆದ ಗುರುವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, 158 ರಲ್ಲಿ 157 ಸ್ಥಾನಗಳಲ್ಲಿ ಜಯಗಳಿಸಿದೆ.

ತ್ರಿಪುರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಟ್ಟು 67ರಲ್ಲಿ 66 ಸ್ಥಾನಗಳು ಬಿಜೆಪಿ ಪಾಲಾಗಿವೆ. 158 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು ಇದರಲ್ಲಿ 91ರಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

158 ಸ್ಥಳೀಯ ಸಂಸ್ಥೆಗಳಲ್ಲಿ 157 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದೆ.  ಆದರೆ ಅಗರ್ತಲಾದ ಪನಿಸ್‌ಗರ್ ಮುನಿಸಿಪಲ್ ಕಾರ್ಪೊರೇಷನ್‌ನಲ್ಲಿ ಮಾತ್ರವೇ ಸಿಪಿಎಂ ಅಭ್ಯರ್ಥಿ ಜಯಗಳಿಸಿದ್ದಾರೆ. 

ಮುಖ್ಯಮಂತ್ರಿ ಧನ್ಯವಾದ :  ಬಿಜೆಪಿ ಭರ್ಜರಿ ಜಯಕ್ಕೆ ಮುಖ್ಯಮಂತ್ರಿ ಬಿಪ್ಲವ್ ದೇಬ್ ಹರ್ಷ ವ್ಯಕ್ತಪಡಿಸಿದ್ದು, ಜಯಕ್ಕೆ ಕಾರಣರಾದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. 

ಶಾ, ಮೋದಿ ಅಭಿನಂದನೆ :   ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಅಭಿನಂದನೆ ತಿಳಿಸಿದ್ದಾರೆ.  ಬಿಜೆಪಿ ನೇತೃತ್ವದ ಸರ್ಕಾರದ ಮಾಡಿ ಅಭಿವೃದ್ಧಿ ಕಾರ್ಯಗಳು ಹಾಗೂ ಉತ್ತಮ ಆಡಳಿತಕ್ಕೆ ಸಿಕ್ಕ ಜಯ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಧನ್ಯವಾದ ತಿಳಿಸಿದ್ದಾರೆ. 

ಸಿಪಿಎಂ ಆರೋಪ : ಆದರೆ ಬಿಜೆಪಿ ಜಯಗಳಿಸಿದ ಬಳಿಕ ಸಿಪಿಎಂ ಮುಖಂಡರು  ಖ್ಯಾತೆ ತೆಗೆದಿದ್ದು ಒತ್ತಾಯಪೂರ್ವಕವಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರ ವಾಪಸ್ ಪಡೆಯಲು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. 

Follow Us:
Download App:
  • android
  • ios