ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ  ಪ್ರತಿಭಟನೆ ಕೈಬಿಟ್ಟು ನೆರೆ ಪರಿಹಾರ ಕಡೆ ಗಮನ ಹರಿಸಲು ಕಾರ್ಯಕರ್ತರಿಗೆ ರಾಹುಲ್ ಕರೆ

ಅಹಮದಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವಾಹದಿಂದ ತತ್ತರಿಸಿರುವ ಗುಜರಾತಿನ ಬನಶಂಕರಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಕಾರಿಗೆ ಶುಕ್ರವಾರ ಕಲ್ಲೆಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತ ಜಯೇಶ್ ದಾರ್ಜಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಹುಲ್ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡುವಾಗ ಕೆಲವರು ಕಪ್ಪುಬಾವುಟವನ್ನು ತೋರಿಸಿದ ಘಟನೆಯೂ ನಡೆದಿತ್ತು. ಆದರೆ ಕಲ್ಲೆಸೆತಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಪ್ರಕರಣವನ್ನು ದಾಖಲಿಸದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ.

Scroll to load tweet…
Scroll to load tweet…

ಆದರೆ ರಾಹುಲ್, ಪ್ರತಿಭಟನೆಯನ್ನು ಕೈಬಿಟ್ಟು ನೆರೆ ಪರಿಹಾರಕ್ಕೆ ಗಮನ ನೀಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.