ಪುರುಲಿಯಾದ ಬಿಜೆಪಿ ಕಾರ್ಯಕರ್ತ ದುಲಾಲ್ ಹತ್ಯೆ ಪ್ರಕರಣವನ್ನು ಭೇಧಿಸಿರುವ ಪೊಲೀಸರು, ದುಲಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ಕಾರ್ಯಕರ್ತ ದುಲಾಲ್ ಅವರ ಮೃತದೇಹ ಹೈ ಟೆನ್ಶನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಕೂಡ ಮಾಡಿತ್ತು.

ಕೋಲ್ಕತ್ತಾ(ಜೂ.3): ಪುರುಲಿಯಾದ ಬಿಜೆಪಿ ಕಾರ್ಯಕರ್ತ ದುಲಾಲ್ ಹತ್ಯೆ ಪ್ರಕರಣವನ್ನು ಭೇಧಿಸಿರುವ ಪೊಲೀಸರು, ದುಲಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ದುಲಾಲ್ ಅವರ ಮೃತದೇಹ ಹೈ ಟೆನ್ಶನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಕೂಡ ಮಾಡಿತ್ತು.

ಆದರೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ದುಲಾಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಕೊಲೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದುಲಾಲ್ ಮರಣೋತ್ತರ ಪರೀಕ್ಷೆ ಬಳಿಕ ಇದೊಂದು ಆತ್ಮಹತ್ಯೆ ಎಂದು ಗೊತ್ತಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಕಾಶ್ ಮಾಘಾರಿಯಾ ತಿಳಿಸಿದ್ದಾರೆ. 

ಕಳೆದ ಬುಧವಾರ ಕೂಡ ಪುರುಲಿಯಾ ಜಿಲ್ಲೆಯ ಸುಪುರ್ಧಿ ಗ್ರಾಮದಲ್ಲಿ ತ್ರಿಲೋಚನ್ ಮಹತೋ ಎಂಬ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈತ ಕೂಡ ಬಿಜೆಪಿ ಕಾರ್ಯಕರ್ತನಾಗಿದ್ದ. ಈ ಎರಡೂ ಪ್ರಕರಣಗಳನ್ನು ರಾಜ್ಯಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ ಎಂದು ಮಾಘಾರಿಯಾ ತಿಳಿಸಿದ್ದಾರೆ.