ಮಿಡ್ನಾಪುರ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ನಡುವಿನ ಜೈ ಶ್ರೀರಾಮ್ ಸಂಘರ್ಷದ ಬೆನ್ನಲ್ಲೇ, ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದೆ. 

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮೇ 23 ರ ಬಳಿಕ ಪಶ್ಚಿಮ ಬಂಗಾಳದಲ್ಲಿ ಕೊಲೆಗೀಡಾದ ಬಿಜೆಪಿ ಕಾರ್ಯಕರ್ತರ ಸಂಖ್ಯೆ 7 ಕ್ಕೇರಿಕೆಯಾಗಿದೆ.

ಉತ್ತರ 24 ಪರಗಣ ಜಿಲ್ಲೆಯ ಬದುರಿಯಾದಲ್ಲಿ ಸೆಣಬಿನ ಹೊಲದಲ್ಲಿ ಚಾಕು ಇರಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತ ಅಜಯ್ ಮಂಡಲ್(48) ಎಂಬುವರ ಮೃತದೇಹ ಪತ್ತೆಯಾಗಿದ್ದು, ತೃಣಮೂಲ ಕಾಂಗ್ರೆಸ್ ಗೂಂಡಾಗಳೇ ಈ ಕೃತ್ಯ ಎಸಗಿದ್ದಾರೆ ಎಂದು ಬಿಜೆಪಿ ದೂರಿದೆ.