ಕೇರಳದಲ್ಲಿ ಸಂಭವಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣವು ಇದೀಗ ಪಶ್ಚಿಮ ಬಂಗಾಳಕ್ಕೂ ಕಾಲಿಟ್ಟಿದೆ. ಇಲ್ಲಿನ ನಾಡಿಯಾ ಜಿಲ್ಲೆಯ ಶಾಂತಿಪುರ ಪ್ರದೇಶದಲ್ಲಿ ಬಿಜೆಪಿ ರ್ಯಕರ್ತನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.  

ಕೋಲ್ಕತಾ : ಕೇರಳದಲ್ಲಿ ಸಂಭವಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣವು ಇದೀಗ ಪಶ್ಚಿಮ ಬಂಗಾಳಕ್ಕೂ ಕಾಲಿಟ್ಟಿದೆ. ಇಲ್ಲಿನ ನಾಡಿಯಾ ಜಿಲ್ಲೆಯ ಶಾಂತಿಪುರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

ಬಿಪ್ಲಬ್ ಸಿಕ್ದರ್ ಎನ್ನುವ ಎನ್ನುವ ವ್ಯಕ್ತಿ ಬುಧವಾರ ರಾತ್ರಿ ವೇಳೆ ಹತ್ಯೆ ಮಾಡಲಾಗಿದೆ. ಮಧ್ಯ ರಾತ್ರಿ ಬಿಪ್ಲವ್ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಪರೀಕ್ಷೆ ನಡೆಸಿದ ವೈದ್ಯರು ಆಗಲೇ ಮೃತಪಟ್ಟಿದ್ದಾಗಿ ಘೋಷಿಸಿದರು. 

ಬಿಜೆಪಿ ನಾಯಕನ ಹತ್ಯೆ ಖಂಡಿಸಿ 12 ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 34 ರ ಬಂದ್ ಗೆ ಕರೆ ನೀಡಿದ್ದರು. ಈ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಗೆಲುವನ್ನು ಸಹಿಸಲಾಗದ ತೃಣಮೂಲಕ ಕಾಂಗ್ರೆಸ್ ಈ ಕೃತ್ಯ ಎಸಗಿದೆ ಎಂದು ಅಲ್ಲಿನ ಮುಖಂಡರು ಆರೋಪಿಸಿದ್ದಾರೆ. 

ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದಿತ್ತು. ಈ ವೇಳೆ ಹಿಂಸಾಚಾರ ನಡೆದು 12ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.