ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರವಾಗಿ ಪ್ರಧಾನಿ ಮೋದಿ ಹಾಗೂ ಆರೆಸ್ಸೆಸ್ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಚಿಕ್ಕಮಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರವಾಗಿ ಪ್ರಧಾನಿ ಮೋದಿ ಹಾಗೂ ಆರೆಸ್ಸೆಸ್ ವಿರುದ್ಧಹೇಳಿಕೆ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

Add Asianetnews Kannada as a Preferred SourcegooglePreferred

ರಾಹುಲ್ ಗಾಂಧಿ ತಪ್ಪಿತಸ್ಥರೆಂದು ಸಾಬೀತಾದಲ್ಲಿ ಅವರು ಆರೆಸ್ಸೆಸ್’ನ ಕ್ಷಮೆಯಾಚಿಸಬೇಕೆಂದು ದೂರಿನಲ್ಲಿ ಹೇಳಲಾಗಿದೆ.

ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿದ್ದ ರಾಹುಲ್ ಗಾಂಧಿ ಪ್ರಧಾನಿ ಮೋದಿ ಹಾಗೂ ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಿನ್ನಾಭಿಪ್ರಾಯಗಳನ್ನು ತುಳಿಯುವುದು ಪ್ರಧಾನಿ ಹಾಗೂ ಸಂಘ ಪರಿವಾರದ ನೀತಿಯಾಗಿದೆ. ಯಾರೆಲ್ಲಾ ಅವರ ಸಿದ್ಧಾಂತವನ್ನು ವಿರೋಧಿಸುತ್ತಾರೋ, ಅವರು ಹಿಂಸಿಸಲ್ಪಡುತ್ತಾರೆ, ಹಲ್ಲೆಗೊಳಗಾಗುತ್ತಾರೆ, ಕೊಲೆಯೂ ಆಗುತ್ತಾರೆ, ಎಂದು ರಾಹುಲ್ ಗಾಂಧಿ ಹೇಳಿದ್ದರು.