ಮಣಿಪುರ ರಾಜ್ಯಪಾಲ ನಜ್ಮಾ ಹೆಫ್ತುಲ್ಲ ಅವ್ರು ಬಿರೇನ್ ಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.
ಮಣಿಪುರದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ನೊಂಗ್ದೊಮ್‌ಬಾಮ್ ಬಿರೇನ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ರಾಜಭನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಮಣಿಪುರ ರಾಜ್ಯಪಾಲ ನಜ್ಮಾ ಹೆಫ್ತುಲ್ಲ ಅವ್ರು ಬಿರೇನ್ ಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.
60 ಮಂದಿ ಸದಸ್ಯಬಲದ ಮಣಿಪುರ ವಿಧಾನಸಭೆಯಲ್ಲಿ, ಕಾಂಗ್ರೆಸ್ 28 ಸ್ಥಾನಗಳಲ್ಲಿ, ಬಿಜೆಪಿ 21 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಎನ್‌ಪಿಪಿ, ಎನ್‌ಪಿಎಫ್, ಎಲ್‌ಜೆಪಿ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸುತ್ತಿದೆ. ಗೋವಾದಂತೆಯೇ ಇಲ್ಲೂ ಕೂಡ ದ್ವೀತಿಯ ಸ್ಥಾನ ಪಡೆದ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ.
