ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.  ಹೃದಯ ಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ನಿನ್ನೆ ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ  ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ್ ಕುಮಾರ್ ಮೃತಪಟ್ಟಿದ್ದಾರೆ. 

ಬೆಂಗಳೂರು : ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ವಿಧಿವಶರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೃದಯ ಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ನಿನ್ನೆ ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದಿದ್ದರು. 

ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ್ ಕುಮಾರ್ ಮೃತಪಟ್ಟಿದ್ದಾರೆ. 

ಆಸ್ಪತ್ರೆ ಕರೆತಂದಾಗಲೇ ಹೃದಯ ಬಡಿತ, ಬಿಪಿ ಕುಸಿದಿದ್ದು, ರಾತ್ರಿ 1 ಗಂಟೆಗೆ ವಿಜಯ್ ಕುಮಾರ್ ವಿಧಿ ವಶರಾಗಿದ್ದಾರೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾರ್ ಸ್ಪಷ್ಟಪಡಿಸಿದ್ದಾರೆ. 

ಜಯನಗರ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಪಕ್ಷದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತರಾಗಿದ್ದ ಅವರು ಇತ್ತೀಚಿನ ದಿನಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. 

ಮೃತರ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ. ಈ ಸಂಬಂಧ ಅವರ ಸಹೋದರ ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.