ಸ್ಫೋಟದ ಹೊಣೆಯನ್ನು ಐಸಿಸ್‌ ಉಗ್ರ ಸಂಘಟನೆ ಹೊತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಕರಾಚಿ (ಫೆ.17): ಪಾಕಿಸ್ತಾನದಲ್ಲಿ ನಿನ್ನೆ ರಾತ್ರಿ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಸುಮಾರು 72 ಜನರು ಸಾವನ್ನಪ್ಪಿದ್ದು 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇನ್ನೂ ಮೃತಪಟ್ಟವರಲ್ಲಿ ತಮ್ಮ ತಾಯಂದಿರೊಂದಿಗಿದ್ದ 30 ಮಕ್ಕಳು ಕೂಡಾ ಸಾವನ್ನಪ್ಪಿದ್ದಾರೆ. ಒಂದು ವಾರದ ಅವಧಿಯೊಳಗೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐದನೇ ಆತ್ಮಾಹುತಿ ಬಾಂಬ್‌ ದಾಳಿ ಇದಾಗಿದೆ.

ಪ್ರತಿ ಗುರುವಾರ ಭಕ್ತಾದಿಗಳು ಸಾಮೂಹಿಕವಾಗಿ ಪ್ರಾರ್ಥನೆ ನೆರವೇರಿಸಲು ಈ ಸೂಫಿ ದರ್ಗಾ ಬಳಿ ಜಮಾಯಿಸುತ್ತಿದ್ದರು. ಮಹಿಳೆಯರಿಗಾಗಿ ಮೀಸಲಿರಿಸುತ್ತಿದ್ದ ಸ್ಥಳದಲ್ಲಿ ಪ್ರಬಲ ಬಾಂಬ್‌ ಸ್ಫೋಟಿಸಿದೆ.

ಸ್ಫೋಟ ನಡೆದ ಸ್ಥಳ ಪಾಕಿಸ್ತಾನ ಮತ್ತು ಅಫಘಾನಿಸ್ತಾನದ ಧಾರ್ಮಿಕ ಸೂಫಿ ಸಂತತಿಯ ಪ್ರಸಿದ್ಧ ತತ್ವಜ್ಞಾನಿ ಮತ್ತು ಕವಿ ಲಾಲ್‌ ಶಹಬಾಜ್‌ ಖಲಂದರ್‌ ಅವರಿಗೆ ಸೇರಿದೆ. ಸ್ಫೋಟದ ಹೊಣೆಯನ್ನು ಐಸಿಸ್‌ ಉಗ್ರ ಸಂಘಟನೆ ಹೊತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.