ಲಂಡನ್(ಜೂ.27): ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನೇವಾರ್ಕ್’ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ, ಲಂಡನ್’ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

ಮುಂಬೈ-ನೇವಾರ್ಕ್ ನಡುವೆ ಸಂಚರಿಸುವ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆ ಬಂದಿತ್ತು. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಲಂಡನ್’ನಲ್ಲಿ ತುರ್ತು ಭೂಸ್ಪರ್ಶ ಮಾಡಿ ವಿಮಾನವನ್ನು ತಪಾಸಣೆಗೆ ಗುರಿಪಡಿಸಲಾಯಿತು.

ಈ ಕುರಿತು ಟ್ವೀಟ್ ಮಾಡಿರುವ ಏರ್ ಇಂಡಿಯಾ, ಇದೊಂದು ಹುಸಿ ಕರೆಯಾಗಿದ್ದು, ಯಾರೂ ಆತಂಕಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದೆ.