ಅಖ್ನೂರ್, ಜಮ್ಮು ಮತ್ತು ಕಾಶ್ಮೀರ (ಅ.06): ಭಾರತೀಯ ಸೇನೆಯು ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಪ್ರತಿದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅಖ್ನೂರ್ ಸೆಕ್ಟರ್ ನಿವಾಸಿಗಳು ಮನೆಗಳನ್ನು ತೊರೆಯುತ್ತಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೀವಭಯ, ಸುರಕ್ಷತೆ ಹಾಗೂ ಇತರೆ ಮೂಲಭೂತ ಅವಶ್ಯಕತೆಗಳ ಅಲಭ್ಯತೆಯಿಂದಾಗಿ ಗ್ರಾಮಸ್ಥರು ಮನೆಗಳನ್ನು ತೊರೆದು ಬೇರೆಡೆಗೆ ವಲಸೆ ಹೋಗುತ್ತಿದ್ದಾರೆ ಎನ್ನಲಾಗಿದೆ.

ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮನೆ-ಮಠ, ವ್ಯವಸಾಯ ಹಾಗೂ ಜಾನುವಾರುಗಳು ಎಲ್ಲವನ್ನೂ ಅಲ್ಲೇ ಬಿಟ್ಟು ಊರನ್ನು ತೊರಯುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತೀಯ ಸೇನೆಯು ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಸತತವಾಗಿ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ.

(ಸಾಂದರ್ಭಿಕ ಚಿತ್ರ)