ಹಾಸನ(ಸೆ.10): ಹಲ್ಲೆ ನಡೆಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಅಬ್ಬೂರು ಗ್ರಾಮದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯುವತಿಯೊಬ್ಬಳಿಗೆ ಡ್ರಾಪ್ ನೀಡಿದ್ದಕ್ಕೆ ಯುವತಿಯ ಕಡೆಯ ನಾಲ್ವರು 18 ವರ್ಷದ ಶರಣ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ತಡೆಯಲು ಬಂದ ಶರಣ್ ತಂದೆಯ ಮೇಲೂ ಹಲ್ಲೆ ನಡೆಸಿದ್ದರು. ಇದಕ್ಕೆ ಮನನೊಂದು ಶರಣ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆ ನಡೆಸಿದ ನಾಲ್ವರು ಪರಾರಿಯಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.