20 ದಿನಗಳ ಹಿಂದೆ ಬಾಲಕನಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆ ಫಲಿಸದೇ  ಬಾಲಕ ಮೃತಪಟ್ಟಿದ್ದಾನೆ. ನವೆಂಬರ್ 9 ರಂದು ಶಾಲೆಗೆ ಹೋಗುತ್ತಿದ್ದ ವೇಳೆ ಆಫ್ರಿದಿ ಎಂಬ ಬಾಲಕನ ಮೇಲೆ ನಾಯಿ ದಾಳಿ ಮಾಡಿತ್ತು.

ಹುಬ್ಬಳ್ಳಿ (ನ.30): ಬೀದಿ ನಾಯಿಗಳ ದಾಳಿಯಿಂದ ಬಾಲಕನೋರ್ವ ಬಲಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 20 ದಿನಗಳ ಹಿಂದೆ ಬಾಲಕನಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ. ನವೆಂಬರ್ 9 ರಂದು ಶಾಲೆಗೆ ಹೋಗುತ್ತಿದ್ದ ವೇಳೆ ಆಫ್ರಿದಿ ಎಂಬ ಬಾಲಕನ ಮೇಲೆ ನಾಯಿ ದಾಳಿ ಮಾಡಿತ್ತು. ನಗರದ ಮಂಟೂರು ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ನಾಯಿ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬೀದಿ ನಾಯಿಗಳ ಹಾವಳಿ ಇದ್ದು, ಇವುಗಳನ್ನು ನಿಯಂತ್ರಣ ಮಾಡದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred