"

ಬೆಂಗಳೂರು : ಕಾಂಗ್ರೆಸ್ ಅತೃಪ್ತ ನಾಯಕ ಎಂದೇ  ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಚಿಕ್ಕಬಳ್ಳಾಪುರ ಪೀಠದ ಬ್ರಹ್ಮಾನಂದ ಸ್ವಾಮೀಜಿ ಹೇಳಿದ್ದಾರೆ. ಜಾರಕಿಹೊಳಿ ಭೇಟಿ ಮಾಡಿ ಮಾತನಾಡಿದ ಸ್ವಾಮೀಜಿ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ  ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದರು. 

ಆದ್ದರಿಂದ ರಮೇಶ್ ಜಾರಕಿಹೊಳಿಗೆ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲಿ. ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿ ನಾಲ್ವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈಗಿನ ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿದ್ಯ ನೀಡಿಲ್ಲ ಎಂದರು. ಸತೀಶ್ ಜಾರಕಿಹೊಳಿ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ ಆದರೆ ಇನ್ನೊಂದು ಸಚಿವ ಸ್ಥಾನ ನೀಡಲಿ ಎಂದು ಬ್ರಹ್ಮಾನಂದ ಸ್ವಾಮೀಜಿ ಹೇಳಿದರು.