ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಜೇಟ್‌‘ಲೈ’ (ಸುಳ್ಳು) ಎಂದು ಕುಹಕವಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯ ರಾಜ್ಯಸಭಾ ಸದಸ್ಯ ಭೂಪೇಂದ್ರ ಯಾದವ್ ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ನವದೆಹಲಿ (ಡಿ.29): ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಜೇಟ್‌‘ಲೈ’ (ಸುಳ್ಳು) ಎಂದು ಕುಹಕವಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯ ರಾಜ್ಯಸಭಾ ಸದಸ್ಯ ಭೂಪೇಂದ್ರ ಯಾದವ್ ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ಈ ನೋಟಿಸ್ ಅನ್ನು ಪರಿಶೀಲಿಸುವುದಾಗಿ ಸಭಾಪತಿ ಎಂ. ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ವಿಚಾರವಾಗಿ ಸಂಸತ್ತಿನಲ್ಲಿ ಕಗ್ಗಂಟು ಸೃಷ್ಟಿಯಾಗಿ ವಾರದಿಂದ ಪ್ರತಿಭಟನೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಬುಧವಾರ ಸ್ಪಷ್ಟನೆ ನೀಡಿದ್ದ ಅರುಣ್ ಜೇಟ್ಲಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್ ಹಾಗೂ ಮಾಜಿ ಉಪರಾ ಷ್ಟ್ರಪತಿ ಹಮೀದ್ ಅನ್ಸಾರಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ದೇಶದ ಬಗ್ಗೆ ಮನಮೋಹನ್ ಅವರಿಗೆ ಇರುವ ಬದ್ಧತೆಯನ್ನು ಮೋದಿ ಅವರು ಪ್ರಶ್ನಿಸಿರಲಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಕಗ್ಗಂಟು ನಿವಾರಣೆಯಾಗಿತ್ತು. ಆದರೆ ಈ ಬಗ್ಗೆ ಟ್ವೀಟರ್‌ನಲ್ಲಿ ತಿರುಗೇಟು ನೀಡಿದ್ದ ರಾಹುಲ್ ಗಾಂಧಿ, ಪ್ರಧಾನಿಗಳು ಯಾವ ಉದ್ದೇಶವನ್ನು ಇಟ್ಟುಕೊಂಡು ಹೇಳಿಕೆ ನೀಡುತ್ತಾರೋ ಗೊತ್ತಿಲ್ಲ. ಆದರೆ ಜೇಟ್ಲಿ ಅವರು ಸುಳ್ಳು ಹೇಳುವ ಮೂಲಕ ಜೇಟ್‌‘ಲೈ’ ಆಗಿದ್ದಾರೆ ಎಂದು ವ್ಯಂಗ್ಯವಾಡಿದ್ದರು.