ಮೂರು ಕಡೆ ಚುನಾವಣೆಗೆ ಬ್ರೇಕ್

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 4, Aug 2018, 11:55 AM IST
Break To Shivamogga, Mysore. Tumkur Local Body Election
Highlights

ಈ ಮೂರು ಸ್ಥಳಗಳಿಗೆ ನಡೆಯುವ ಚುನಾವಣೆಗೆ ಸದ್ಯಕ್ಕೆ ಬ್ರೇಕ್ ಹಾಕಲಾಗಿದೆ. ವೇಳಾಪಟ್ಟಿಯನ್ನು ಸದ್ಯದ ಮಟ್ಟಿಗೆ ಪ್ರಕಟಿಸದಂತೆ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರಕ್ಕೆ ಸೂಚಿಸಿದೆ. 

ಬೆಂಗಳೂರು: ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ವೇಳಾಪಟ್ಟಿಯನ್ನು ಸದ್ಯದ ಮಟ್ಟಿಗೆ ಪ್ರಕಟಿಸದಂತೆ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರಕ್ಕೆ ಸೂಚಿಸಿದೆ. 

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ರಾಜ್ಯ ಸರ್ಕಾರ ಪ್ರಕಟಿಸಿರುವ ಮೀಸಲು, ತುಮಕೂರು ಹಾಗೂ ಮೈಸೂರು ಮಹಾನಗರ ಪಾಲಿಕೆಗಳ ವಾರ್ಡ್ ಮರುವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯ ಮೂರ್ತಿ ಬಿ. ವೀರಪ್ಪ ಅವರ ಏಕಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ. ತೀರ್ಪು ಪ್ರಕಟಿಸುವರೆಗೆ ಈ ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಬಾರದು ಎಂದು ಆಯೋಗಕ್ಕೆ ನ್ಯಾಯಪೀಠ ಸೂಚಿಸಿದೆ.

loader