Asianet Suvarna News Asianet Suvarna News

ಸರ್ಕಾರ ಪತನ ವದಂತಿ: ಗೌಡರ ಮನೆಗೆ ಭೇಟಿ ನೀಡಿದ್ಯಾರು..?

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಭಿನ್ನ ರೀತಿಯಲ್ಲಿ ರಾಜಕೀಯ ಬೆಳವಣಿಗೆಗಳಾಗುತ್ತಿದ್ದು ಇದೀಗ ಜೆಡಿಎಸ್ ಮುಖಂಡ ದೇವೇಗೌಡ ಅವರ ನಿವಾಸಕ್ಕೆ ವ್ಯಕ್ತಿಯೋರ್ವರು ಆಗಮಿಸಿ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 

British High Commissioner Asks About Stability Of Coalition Govt
Author
Bengaluru, First Published Sep 1, 2018, 11:20 AM IST

ಬೆಂಗಳೂರು :  ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಂದ ಬ್ರಿಟಿಷ್‌ ಹೈಕಮಿಷನರ್‌ ಮಾಹಿತಿ ಪಡೆದುಕೊಂಡಿದ್ದಾರೆ. ಬ್ರಿಟಿಷ್‌ ಹೈಕಮಿಷನರ್‌ ಡೊನಾಲ್ಡ್‌ ಮೈಕ್‌ ಆಲಿಸ್ಟರ್‌ ಅವರು ಶುಕ್ರವಾರ ದೇವೇಗೌಡರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ದೇವೇಗೌಡರು, ಇದೊಂದು ಸೌಜನ್ಯದ ಭೇಟಿ. ಬೇರೆ ಬೇರೆ ರಾಜ್ಯಗಳಲ್ಲಿ ರಾಜಕೀಯ ವ್ಯವಸ್ಥೆ ಹೇಗಿದೆ ಎಂಬುದನ್ನು ತಿಳಿಯಲು ಬ್ರಿಟಿಷ್‌ ಹೈಕಮಿಷನರ್‌ ಬರುತ್ತಾರೆ. ರಾಜ್ಯದಲ್ಲಿ ಕೆಲವು ಗೊಂದಲಗಳಿವೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಂದ ತಿಳಿದು ಆಗಮಿಸಿದ್ದಾರೆ. 

ಈ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸಲಾಗಿದೆ. ಸರ್ಕಾರವು ಪತನವಾಗಲಿದೆ ಎಂಬ ರೀತಿಯಲ್ಲಿ ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ, ಇದು ಸತ್ಯಕ್ಕೆ ದೂರವಾದುದು. ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟುಕೊಡಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಇಬ್ಬರೂ ಸಿದ್ಧ ಇಲ್ಲ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಹೋಗಿದ್ದಾರೆ ಎಂದು ಹೇಳಿದರು.

Follow Us:
Download App:
  • android
  • ios