ಎಸ್. ಎಂ ಕೃಷ್ಣ ಸಧ್ಯದಲ್ಲೇ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಈವರೆಗಿನ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರು(ಫೆ.04): ಎಸ್. ಎಂ ಕೃಷ್ಣ ಸಧ್ಯದಲ್ಲೇ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಈವರೆಗಿನ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಲಬುರ್ಗಿಯಲ್ಲಿ ಹೇಳಿಕೆ ನೀಡಿದ ಬಿಎಸ್'ವೈ 'ಪ್ರಧಾನಿ ಮೋದಿಯ ಮೇಲೆ ಅಪಾರ ಗೌರವ ಇರುವುದರಿಂದ ಬಿಜೆಪಿ ಸೇರ್ಪಡೆಯಾಗುತ್ತೇನೆಂದು ಎಸ್. ಎಂ ಕೃಷ್ಣ ಹೇಳಿದ್ದಾರೆ. ಇದಕ್ಕೆ ನನ್ನ ಯಾವುದೇ ರೀತಿಯ ಆಕ್ಷೇಪವಿಲ್ಲ' ಎಂದಿದ್ದಾರೆ.

ಅಲ್ಲದೇ ನಾಳೆ ಎಸ್. ಎಂ ಕೃಷ್ಣರವರನ್ನು ಭೇಟಿಯಾಗುತ್ತೇನೆ. ಇವರು ಬಿಜೆಪಿಗೆ ಸೇರ್ಪಡೆಯಾಗುವುದರಿಂದ ಬಿಜೆಪಿಯ ಶಕ್ತಿ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.