Asianet Suvarna News Asianet Suvarna News

ಮೋದಿ ಮತ್ತೆ ಪ್ರಧಾನಿಯಾಗಬೇಕು: ಕೋಪ ಮರೆತು ರಾಜಿಯಾದ ಬಿಎಸ್‌ವೈ, ಸೊಗಡು ಶಿವಣ್ಣ

ಪರಸ್ಪರ ಮುನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ| ಕೋಪ ಮರೆತು ರಾಜಿಯಾದ ರಾಜಕೀಯ ನಾಯಕರು

BS yeddyurappa And Sogadu Shivanna become Friends Again
Author
Bangalore, First Published Mar 25, 2019, 10:02 AM IST

ತುಮಕೂರು[ಮಾ.25]: ಹಲವು ವರ್ಷಗಳಿಂದ ಪರಸ್ಪರ ಮುನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಕಡೆಗೂ ರಾಜಿಯಾಗಿದ್ದಾರೆ.

ಖುದ್ದು ಯಡಿಯೂರಪ್ಪನವರೇ ಸೊಗಡು ಶಿವಣ್ಣ ಅವರಿಗೆ ಕರೆ ಮಾಡಿ ಮನೆಗೆ ಬರುವುದಾಗಿ ತಿಳಿಸಿದ್ದರು. ಅದರಂತೆ ಭಾನುವಾರ ಸಂಜೆ ಸೊಗಡು ಶಿವಣ್ಣ ಅವರ ಮನೆಗೆ ತೆರಳಿ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದರು. ಬಳಿಕ ಹೊರ ಬಂದ ಯಡಿಯೂರಪ್ಪನವರು ಸೊಗಡು ಶಿವಣ್ಣ ಅವರಿಗೆ ಈ ಹಿಂದೆ ಅನ್ಯಾಯ ಆಗಿದೆ. ಚುನಾವಣೆ ನಂತರ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಅವರಿಗೆ ಏನು ಸ್ಥಾನಮಾನ ಕೊಡಬೇಕೋ ಅದನ್ನು ಕೊಡುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ಸಿದ್ಧಗಂಗೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ಎಲ್ಲರೂ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡುತ್ತೇವೆ. ಈ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಕ್ಷೇತ್ರವನ್ನು ಗೆಲ್ಲುವುದಾಗಿ ತಿಳಿಸಿದರು.

ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡು ಕೆ.ಎಸ್‌.ಈಶ್ವರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಹಲವು ಬಾರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು. ಯಡಿಯೂರಪ್ಪ ವಿರುದ್ಧ ಬಂಡಾಯವೆದ್ದಾಗ ಎಲ್ಲ ಅತೃಪ್ತರ ಸಭೆ ನಡೆಯುತ್ತಿದ್ದದ್ದು ತುಮಕೂರು ಹೊರವಲಯದ ಸೊಗಡು ಶಿವಣ್ಣ ಅವರ ತೋಟದ ಮನೆಯಲ್ಲಿ.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ತುಮಕೂರು ಕ್ಷೇತ್ರಕ್ಕೆ ಸೊಗಡು ಶಿವಣ್ಣ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಯಡಿಯೂರಪ್ಪ ಟಿಕೆಟ್‌ ನಿರಾಕರಿಸಿದ್ದರು. ಅದಕ್ಕೂ ಮುನ್ನ ಜಿಲ್ಲಾ ಬಿಜೆಪಿ ಅಧ್ಯಕ್ಷಗಾದಿ ಸಿಗುತ್ತದೆ ಎಂದು ನಿರೀಕ್ಷಿಸಿದ್ದರು. ಅದೂ ಕೂಡಾ ಹುಸಿಯಾಯಿತು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಳೆದ ಚುನಾವಣೆಯಲ್ಲಿ ತಟಸ್ಥವಾಗಿದ್ದರು. ಮಾಜಿ ಸಚಿವ ಜಿ.ಎಸ್‌. ಬಸವರಾಜ್‌ ಟಿಕೆಟ್‌ ಘೋಷಣೆಯಾದಾಗಲಂತೂ ಪಕ್ಷ ಬಿಡದೆ ತಟಸ್ಥವಾಗಿ ಉಳಿಯಲು ನಿರ್ಧರಿಸಿದ್ದರು

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

Follow Us:
Download App:
  • android
  • ios