ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ನಂದಗೋಕುಲ ಬಡಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ನಂದಗೋಕುಲ ಬಡಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು.

ಭಾರಿ ಮಳೆಯಿಂದಾಗಿ ಸಾರ್ವಜನಿಕರಿಗೆ ಬಹುಡೊಡ್ದ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು ಸಾವಿರಾರು ಜನರ ಬದುಕು ಬೀದಿಗೆ ಬಂದಿದೆ. ಸರ್ಕಾರ ಜನರ ದುಡ್ಡನ್ನು ಹಾಳುಮಾಡಿ ಯಾವ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೆ ಇಂತಹ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಸರ್ಕಾರದ ವಿರುದ್ಧ ಬಿಎಸ್ವೈವಾಗ್ದಾಳಿ ನಡೆಸಿದರು.

ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಗಳನ್ನು ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿಗಳು ಕೊಚ್ಚಿಕೊಳ್ಳುತ್ತಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು ಎಂದು ಯಡಿಯೂರಪ್ಪನವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.