ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ಯಡಿಯೂರಪ್ಪ ಅವರು ದ್ವಂದ್ವದಲ್ಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ಯಡಿಯೂರಪ್ಪ ಅವರು ದ್ವಂದ್ವದಲ್ಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಕಣಕ್ಕಿಳಿಯುತ್ತೇನೆ. ವಿಜಯಪುರ ಇಲ್ಲವೇ ಬಾಗಲಕೋಟೆಯಿಂದ ಸ್ಪರ್ಧಿಸುತ್ತೇನೆ. ಪಕ್ಷದ ಮುಖಂಡರ ಸಲಹೆ- ಸೂಚನೆ ಪಡೆದೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ. ಉತ್ತರ ಕರ್ನಾಟಕ ಭಾಗದಿಂದಲೇ ಜನಾದೇಶ ಪಡೆಯುವ ವಿಶ್ವಾಸವಿದೆ, ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವುದಾದರೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಸ್ಪರ್ಧಿಸಲಿ, ಎಂದು ಬ. ಬಾಗೇವಾಡಿ ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ ಆಹ್ವಾನ ನೀಡಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಯಡಿಯೂರಪ್ಪ ಅವರು ಸ್ಪರ್ಧಿಸಲು ಮುಂದಾದಲ್ಲಿ 50 ಸಾವಿರ ಮತಗಳಿಂದ ಗೆಲ್ಲಿಸುತ್ತೇವೆ, ಎಂದು ಬೀದರ್ ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ಯಡಿಯೂರಪ್ಪ ಅವರಿಗೆ ನಾನು ಪ್ರತಿನಿಧಿಸುವ ಹುಕ್ಕೇರಿ ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ. ಅವರನ್ನು ನಾನು ಗೆಲ್ಲಿಸುವೆ ಎಂದು ಬಿಜೆಪಿ ಶಾಸಕ ಉಮೇಶ ಕತ್ತಿ ಕೂಡಾ ಹೇಳಿದ್ದಾರೆ.