Asianet Suvarna News Asianet Suvarna News

ಕರ್ನಾಟಕದಲ್ಲಿ ಯಡಿಯೂರಪ್ಪನವರೇ ಬಿಜೆಪಿಯ ಸಿಎಂ ಅಭ್ಯರ್ಥಿ

2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಬಿಜೆಪಿಯ ಸಿಎಂ ಅಭ್ಯರ್ಥಿ ಎಂದು ಅಮಿತ್ ಶಾ ಇಂದು ಶುಕ್ರವಾರ ಘೋಷಿಸಿದ್ದಾರೆ. ಇದರೊಂದಿಗೆ, ಈಶ್ವರಪ್ಪ ವರ್ಸಸ್ ಯಡಿಯೂರಪ್ಪ ಬಣಗಳ ಕಚ್ಚಾಟದಲ್ಲಿ ರಾಜ್ಯದ ಬಿಜೆಪಿಯಲ್ಲಿ ಏರ್ಪಟ್ಟಿರುವ ಗೊಂದಲಕ್ಕೆ ಅಮಿತ್ ಶಾ ತೆರೆ ಎಳೆದಿದ್ದಾರೆ. ಯಡಿಯೂರಪ್ಪನವರೇ ರಾಜ್ಯ ಬಿಜೆಪಿಯಲ್ಲಿ ಅಂತಿಮ ಎಂಬ ಸಂದೇಶವನ್ನು ಅಮಿತ್ ಶಾ ಸಾರಿದ್ದಾರೆ.

bs yeddyurappa is cm candidate from bjp says amit shah
  • Facebook
  • Twitter
  • Whatsapp

ಬೆಂಗಳೂರು(ಮೇ 26): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲೇ ಬಿಜೆಪಿ ಜನತೆಯ ಮುಂದೆ ನಿಲ್ಲುವುದು ಖಚಿತವಾಗಿದೆ. ಅಲ್ಲದೇ, ಬಿಎಸ್'ವೈ ಅವರನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಮುಂದಿಡಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಈ ವಿಷಯವನ್ನು ಪ್ರಕಟಿಸಿದ್ದಾರೆ. 2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಬಿಜೆಪಿಯ ಸಿಎಂ ಅಭ್ಯರ್ಥಿ ಎಂದು ಅಮಿತ್ ಶಾ ಇಂದು ಶುಕ್ರವಾರ ಘೋಷಿಸಿದ್ದಾರೆ. ಇದರೊಂದಿಗೆ, ಈಶ್ವರಪ್ಪ ವರ್ಸಸ್ ಯಡಿಯೂರಪ್ಪ ಬಣಗಳ ಕಚ್ಚಾಟದಲ್ಲಿ ರಾಜ್ಯದ ಬಿಜೆಪಿಯಲ್ಲಿ ಏರ್ಪಟ್ಟಿರುವ ಗೊಂದಲಕ್ಕೆ ಅಮಿತ್ ಶಾ ತೆರೆ ಎಳೆದಿದ್ದಾರೆ. ಯಡಿಯೂರಪ್ಪನವರೇ ರಾಜ್ಯ ಬಿಜೆಪಿಯಲ್ಲಿ ಅಂತಿಮ ಎಂಬ ಸಂದೇಶವನ್ನು ಅಮಿತ್ ಶಾ ಸಾರಿದ್ದಾರೆ.

Follow Us:
Download App:
  • android
  • ios