ಬೆಂಗಳೂರು [ಜು.24] : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಏರಲು ಸಿದ್ಧವಾಗಿದೆ. ಯಡಿಯೂರಪ್ಪ ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಆದರೆ ಈ ಬಾರಿ ಬೆಳಗಾವಿಯಲ್ಲಿ ಬಿ.ಎಸ್ ವೈ ಸಮಾರಂಭ ನಡೆಸಬೇಕೆಂದು ಉತ್ತರ ಕರ್ನಾಟಕದ ಜನತೆ ಆಗ್ರಹಿಸುತ್ತಿದ್ದಾರೆ.

ಉತ್ತರ ಕರ್ನಾಟಕದ ಶಾಸಕರು ಇಂಥ ಸಲಹೆ ನೀಡಿದ್ದು, ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರಮಾಣ ವಚನ ಸಮಾರಂಭ ನಡೆಸುವಂತೆ ಕೇಳಿಕೊಂಡಿದ್ದಾರೆ. ಒಂದು ವೇಳೆ ಸುವರ್ಣಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದಲ್ಲಿ ಹೊಸ ಇತಿಹಾಸವೊಂದು ಸೃಷ್ಟಿಯಾಗಲಿದ್ದು, ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಯೂ ಅನುಕೂಲವಾಗಲಿದೆ ಎನ್ನುವುದು ಅಲ್ಲಿಯ ಜನರ ಅಭಿಪ್ರಾಯ. 

ಯಡಿಯೂರಪ್ಪ ಮಂತ್ರಿ ಮಂಡಲದ ಸಂಭಾವ್ಯರ ಪಟ್ಟಿ

ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಲು ಜ್ಯೋತಿಷಿಗಳು ಎರಡು ಮುಹೂರ್ತ ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವ ಬಗ್ಗೆ ಭರವಸೆ ನೀಡಿದ್ದಾರೆ.