ಎಚ್‌ಡಿಕೆ ಎಷ್ಟುವರ್ಷ ಬೇಕಾದ್ರೂ ಸಿಎಂ ಆಗಿರಲಿ

First Published 17, Jun 2018, 8:11 AM IST
BS Yeddyurappa React To HD Kumaraswamy
Highlights

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಂದು ವರ್ಷ ನನ್ನನ್ನು ಯಾರೂ ಮುಟ್ಟೋಕೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಅವರು ಎಷ್ಟು ವರ್ಷವಾದರೂ ಮುಂದುವರಿಯಲಿ, ನಮ್ಮ ಅಭ್ಯಂತರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
 

ಬೆಂಗಳೂರು :  ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಂದು ವರ್ಷ ನನ್ನನ್ನು ಯಾರೂ ಮುಟ್ಟೋಕೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಅವರು ಎಷ್ಟು ವರ್ಷವಾದರೂ ಮುಂದುವರಿಯಲಿ, ನಮ್ಮ ಅಭ್ಯಂತರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಡಾಲರ್ಸ್‌ ಕಾಲೋನಿಯಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷೆಯಾಗಬೇಕು. ಕಾನೂನು ರೀತಿಯಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಔತಣಕೂಟದಲ್ಲಿ ಭಾಗಿ:  ರಮ್ಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಅಬ್ದುಲ್‌ ಅಜೀಂ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದರು. ಭೂಪಸಂದ್ರದಲ್ಲಿನ ತಮ್ಮ ನಿವಾಸದಲ್ಲಿ ಅಬ್ದುಲ್‌ ಅಜೀಂ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡರು. ಯಡಿಯೂರಪ್ಪ ಅವರ ಜೊತೆ ಶಾಸಕ ಎಸ್‌.ಆರ್‌.ವಿಶ್ವನಾಥ್‌, ನಾಯಕ ಸಿ.ಪಿ.ಯೋಗೇಶ್ವರ್‌ ಸಾಥ್‌ ನೀಡಿದರು.

loader