ಸಿಪಿಎಂ ಮನೆಗೆ ಕಳಿಸಿದ್ದಾಯ್ತು, ಇನ್ನು ಮುಂದಿನ ಗುರಿ ಕರ್ನಾಟಕ: BSY

First Published 3, Mar 2018, 4:49 PM IST
BS Yeddyurappa Reaction On BJP Win in Tripura Assembly Election
Highlights

ದೇಶದ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಂದೆ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮೋದಿ ಅಲೆ ರಾಜ್ಯದಲ್ಲೂ ಇದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಮಾ.03): ಸಿಪಿಎಂ ಪಕ್ಷವನ್ನು ಮನೆಗೆ ಕಳಿಸಿದ್ದೇವೆ. ನಮಗೆ ಬಾಕಿಯಿರುವುದು ಈಗ ಕರ್ನಾಟಕ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದರ ಕುರಿತು ಪ್ರತಿಕ್ರಿಯಿಸಿರುವ ಬಿಎಸ್'ವೈ, ದೇಶದ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಂದೆ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮೋದಿ ಅಲೆ ರಾಜ್ಯದಲ್ಲೂ ಇದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮಿತ್ ಶಾ ಹಾಗೂ ಮೋದಿ ಶ್ರಮದಿಂದ ತ್ರಿಪುರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕರ್ನಾಟಕದಲ್ಲಿ ಮತ್ತೆ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

loader