ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿದ್ದಾರೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ಸುದ್ದಿ ತೀವ್ರ ಆಘಾತ ತಂದಿದೆ, ಈ ಘಟನೆಯಿಂದ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಕೃತ್ಯ ಅತ್ಯಂತ ಖಂಡನೀಯ ಮತ್ತು ಹೇಯವಾಗಿದೆ. ಶೀಘ್ರವೇ ಹಂತಕರನ್ನು ಬಂಧಿಸಬೇಕೆಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ರಾಜರಾಜೆಶ್ವರಿ ನಗರದಲ್ಲಿರುವ ಅವರ ನಿವಾಸದ ಮೇಲೆ ಇಂದು ಸಂಜೆ ಸುಮಾರು 6.30ರ ಹೊತ್ತಿಗೆ ದುಷ್ಕರ್ಮಿಗಳು ಗೌರಿ ಲಂಕೇಶ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಹತ್ಯೆ ಖಂಡನೀಯ: ಶೆಟ್ಟರ್
ಇದೊಂದು ದುರ್ದೈವದ ಸಂಗತಿ. ವಿಷಯ ತಿಳಿದು ಆಘಾತವಾಯಿತು. ವೈಚಾರಿಕ ಭಿನ್ನಾಭಿಪ್ರಾಯ ಏನೇ ಇರಬಹುದು, ಹತ್ಯೆಯು ಖಂಡನೀಯವೆಂದು ವಿಪಕ್ಷ ನಾಯಕ ಜಗದೇಶ್ ಶೆಟ್ಟರ್ ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಮುಖ್ಯಮಂತರಿ ಮತ್ತು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.
