ಬೆಂಗಳೂರು: ಮುಖ್ಯಮಂತ್ರಿ ಗದ್ದೆಯಲ್ಲಿ ಭತ್ತ ನಾಟಿ ಮಾಡದರೆ ರೈತರು ಉದ್ಧಾರವಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಕಲಬುರಗಿ, ಬೀದರ್‌ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಬರ ಆವರಿಸಿದೆ. ಕುಡಿಯುವ ನೀರಿಗಾಗಿ ಜನ ಪರಿತಪಿಸುತ್ತಿದ್ದಾರೆ. ಸರ್ಕಾರದ ಸಚಿವರಾಗಲೀ ಅಥವಾ ಅಧಿಕಾರಿಗಳಾಗಲೀ ಯಾರೊಬ್ಬರೂ ಇತ್ತ ಗಮನಹರಿಸಿಲ್ಲ.

 ಈ ಸಮ್ಮಿಶ್ರ ಸರ್ಕಾರದ ಬಗ್ಗೆ ಜನರಿಗೆ ತೃಪ್ತಿ-ಸಮಾಧಾನವಿಲ್ಲ. ಯಾವಾಗ ಈ ಸರ್ಕಾರ ಹೋಗುತ್ತದೋ ಎಂದು ಶಾಪ ಹಾಕುತ್ತಿದ್ದಾರೆ ಎಂದು ಯಡಿಯೂರಪ್ಪ ಟೀಕಿಸಿದರು.