ರಾಜ್ಯ ರಾಜಕೀಯದ ಬಗ್ಗೆ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಚುನಾವಣೆ ಬಳಿಕ ಕುಮಾರಸ್ವಾಮಿ ಮನೆಗೆ ಹೋಗಲಿದ್ದಾರೆ ಎಂದು ಹೇಳಿದ್ದಾರೆ. 

ಹೂವಿನಹಡಗಲಿ/ಕಂಪ್ಲಿ/ಹಗರಿಬೊಮ್ಮನಹಳ್ಳಿ:  ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯ ಫಲಿತಾಂಶದಿಂದ ರಾಜಕೀಯ ಏರುಪೇರುಗಳಾಗಿ ಮೈತ್ರಿ ಸರ್ಕಾರ ಕುಸಿದು ಸಿಎಂ ಎಚ್.ಡಿ.ಕುಮಾರಸ್ವಾಮಿ ಮನೆಗೆ ಹೋಗುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. 

Add Asianetnews Kannada as a Preferred SourcegooglePreferred

ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿ, ಜೆಡಿಎಸ್, ಕಾಂಗ್ರೆಸ್ ಹಣ ಬಲದಿಂದ, ಜಾತಿ ವಿಷ ಬೀಜ ಬಿತ್ತುವ ಮೂಲಕ ನಾವು ಗೆದ್ದೇ ಗೆಲ್ಲುತ್ತೇವೆಂಬ ಭ್ರಮೆಯಲ್ಲಿವೆ. ಸರ್ಕಾರದ ದುರಾಡಳಿತಕ್ಕೆ ಬಳ್ಳಾರಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. 

ರಾಜ್ಯ ರೈತರ ಸಾಲ ಮನ್ನಾ ಮಾಡುತ್ತೇನೆಂದು ಅಧಿಕಾರಕ್ಕೆ ಬಂದ ದಿನದಿಂದ ಬೊಬ್ಬೆ ಹೊಡೆಯುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ 200 ರೈತರ ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರದ ಬೊಕ್ಕಸದಿಂದ ಹಣ ನೀಡುತ್ತಿಲ್ಲ ಎಂದು ಟೀಕಿಸಿದರು.