ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಅವರು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ನವದೆಹಲಿ:  ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ಎಸ್‌. ರಾಘವೇಂದ್ರ ಅವರು ಲೋಕಸಭೆ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಬಿ.ಎಸ್‌.ಯಡಿಯೂರಪ್ಪ ಅವರು ಜಯ ಸಾಧಿಸಿದ್ದರು. 

ಬಿಎಸ್‌ವೈ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿ.ಎಸ್‌ ರಾಘವೇಂದ್ರ ಅವರು ಸಂಸತ್ತಿಗೆ ಆಯ್ಕೆಯಾಗಿದ್ದರು.