Asianet Suvarna News Asianet Suvarna News

ಸಚಿವ ಆಕಾಂಕ್ಷಿಗಳಾಗಿದ್ದ 6 ಶಾಸಕರಿಗೆ ಸರ್ಕಾರದಲ್ಲಿ ವಿವಿಧ ಹುದ್ದೆ ನೀಡಿದ BSY

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 6 ಶಾಸಕರರಿಗೆ ವಿವಿಧ ಹುದ್ದೆಗಳನ್ನು ನೀಡಲಾಗಿದೆ. ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು  ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿದ್ದಾರೆ.

BS Yediyurappa govt appoints president to various committees
Author
Bengaluru, First Published Sep 20, 2019, 9:42 PM IST

ಬೆಂಗಳೂರು, [ಸೆ.20]:  ವಿಧಾನಸಭೆಯ ವಿವಿಧ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು [ಶುಕ್ರವಾರ] ಆದೇಶ ಹೊರಡಿಸಿದೆ.

ಬಿಎಸ್ ವೈ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿರುವ ಶಾಸಕರ ಪೈಕಿ ಆರು ಜನಕ್ಕೆ ವಿಧಾನಸಭೆಯ ವಿವಿಧ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿ ಸಮಾಧಾನಪಡಿಸಲಾಗಿದೆ. ಒಟ್ಟು 6 ವಿಧಾನಸಭೆಯ ಸಮಿತಿಗಳಿಗೆ ಆರು ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮೊನ್ನೇ ಅಷ್ಟೇ ಎಂ.ಪಿ.ರೇಣುಕಾಚಾರ್ಯ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಆರು ಶಾಸಕರನ್ನು ವಿವಿಧ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ. 
 
1. SC ಮತ್ತು SC ಕಲ್ಯಾಣ ಸಮಿತಿಗೆ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
2. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ ಅವನ್ನು ನೇಮಿಸಲಾಗಿದೆ. 
3. ಗ್ರಂಥಾಲಯ ಸಮಿತಿಗೆ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ.
4. ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಅಧ್ಯಕ್ಷರಾಗಿ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ. 
5. ಹಕ್ಕುಬಾದ್ಯತಾ ಸಮಿತಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. 
6. ಅಂದಾಜುಗಳ ಸಮಿತಿಗೆ ಹಾನಗಲ್ಲ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರನ್ನು ಅಧಕ್ಷರನ್ನಾಗಿ ನೇಮಕ ಮಾಡಲಾಗಿದೆ.

Follow Us:
Download App:
  • android
  • ios