ಬೆಂಗಳೂರು [ಸೆ.15]:  ಜಿಎಸ್‌ಟಿ ವಿಚಾರ ಕುರಿತು ಬೆಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಸುಶೀಲ್‌ ಕುಮಾರ್‌ ಮೋದಿ ಕೆಲ ನಿಮಿಷಗಳ ಕಾಲ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ವಾಪಸ್‌ ತೆರಳಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸೆ.20ರಂದು ಪಣಜಿಯಲ್ಲಿ ಜಿಎಸ್‌ಟಿ ಕೌನ್ಸಿಲ್‌ ಸಭೆ ಇದೆ. ರಾಜ್ಯದಿಂದ ನಾನು ಸಭೆಯಲ್ಲಿ ಭಾಗವಹಿಸಿ ರಾಜ್ಯದ ನಿಲುವು ಪ್ರಕಟಿಸುತ್ತೇನೆ. ಈ ಕೌನ್ಸಿಲ್‌ಗೆ ಪೂರ್ವಭಾವಿಯಾಗಿ ಶನಿವಾರ ಬೆಂಗಳೂರಿನಲ್ಲಿ ಬಿಹಾರದ ಉಪಮುಖ್ಯಮಂತ್ರಿ ಸುಶಿಲ್‌ ಕುಮಾರ್‌ ಮೋದಿ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಔರಾದ್ಕರ್‌ ವರದಿ ಆಧಾರದ ಮೇಲೆ ಪೊಲೀಸರ ವೇತನ ಪರಿಷ್ಕರಿಸಿ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಮೊದಲ ಪಟ್ಟಿಯಲ್ಲಿ ಕೈಬಿಟ್ಟು ಹೋಗಿರುವ ಎಸ್‌ಐ, ಎಸಿಪಿ ದರ್ಜೆಯ ಅಧಿಕಾರಿಗಳು, ಅಗ್ನಿಶಾಮಕದವರು ಮತ್ತು ಬಂದೀಖಾನೆ ಅಧಿಕಾರಿಗಳಿಗೂ ಸಹ ವೇತನ ಪರಿಷ್ಕರಣೆ ಮಾಡಲಾಗುವುದು. ಈ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದರು.