ಚಿತ್ರದುರ್ಗ[ಆ.07]: ಕೇಂದ್ರದಿಂದ ನೆರೆ ಪರಿಹಾರದ 2ನೇ ಕಂತು ಬರುವುದಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ. ಆ ರೀತಿ ಹೇಳಲು ಅವರೇನು ಪ್ರಧಾನಿಯಾ ಎಂದು ಪ್ರಶ್ನಿಸಿದ್ದಾರೆ.

ಮುರುಘಾಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕುಮಾರಸ್ವಾಮಿಗೆ ಅತೃಪ್ತಿ ಹಾಗೂ ಅಸಮಾಧಾನ ಇದೆ. ಹತಾಶೆಯಿಂದ ಏನೇನೋ ಮಾತನಾಡುತ್ತಾ ಇದ್ದಾರೆ. ಅವರು ಹೇಳಿಕೆ ಕೊಡುವ ಮುನ್ನ ಹತ್ತು ಬಾರಿ ಯೋಚಿಸುವುದು ಒಳ್ಳೆಯದು’ ಎಂದು ಸಲಹೆ ಮಾಡಿದರು.

'ನಳಿನ್ ಕುಮಾರ್ ಕುಡುಕರಂತೆ ಮಾತನಾಡುತ್ತಾರೆ'

ನೆರೆ ಪರಿಹಾರವಾಗಿ ಕೇಂದ್ರದಿಂದ ಎರಡನೇ ಕಂತಿನ ಹಣ ಬಿಡುಗಡೆಯಾಗಲಿದೆ. ಈಗ ಬಿಡುಗಡೆಯಾಗಿರುವ ಹಣದಲ್ಲಿ ನೆರೆ ಸಂತ್ರಸ್ತರ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ನವೆಂಬರ್‌ ಇಲ್ಲವೇ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರದಿಂದಲೂ ಸಂತ್ರಸ್ತರಿಗೆ ಹೆಚ್ಚಿನ ನೆರವು ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಹಣಕಾಸು ಸಮಸ್ಯೆ ಇದೆ ಎಂದಿಲ್ಲ:

ನಂತರ ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಹಣಕಾಸು ಸಮಸ್ಯೆ ಇದೆ ಎಂದು ನಾನು ಹೇಳಿಯೇ ಇಲ್ಲ. ಸದ್ಯದ ಆರ್ಥಿಕ ಸ್ಥಿತಿಯಲ್ಲಿ ಹೊಸ ಯೋಜನೆ ಅಥವಾ ಅಭಿವೃದ್ಧಿ ಕೆಲಸಗಳಿಗೆ ಹಣ ನೀಡುವುದು ಕಷ್ಟಾಗುತ್ತದೆ ಎಂದಿದ್ದೆ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

ಪರಿಹಾರ ಬಂದಿಲ್ಲ ಅಂತಿದ್ದ ಎಚ್‌ಡಿಕೆ, ಸಿದ್ದು ಈಗ ಇಷ್ಟೇನಾ ಎನ್ನುತ್ತಿದ್ದಾರೆ: ಈಶ್ವರಪ್ಪ

ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಸಾಕಷ್ಟುಹಾನಿಯಾಗಿದೆ. ಅಲ್ಲಿನ ಸಂತ್ರಸ್ತರಿಗೆ ಒಂದು ಲಕ್ಷ ಮನೆ ನಿರ್ಮಾಣ ಮಾಡಿಕೊಡಬೇಕಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ನಿರ್ವಹಣೆ ವಿಚಾರ ಪ್ರಸ್ತಾಪಿಸಿದ್ದೆ. ಅದನ್ನೇ ಅಪಾರ್ಥ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.