ನಿನ್ನೆ ರಾತ್ರಿ ಸರಿಸುಮಾರು 9.30ಕ್ಕೆ ಪೆಟ್ರೋಲ್‌ ಬಂಕ್‌ ಬಳಿ ಕೆಲ ಅಪರಿಚಿತ ದುಷ್ಕರ್ಮಿಗಳು ಮೊಹಮ್ಮದ್‌ ಶಮಿಯನ್ನು ಅಡ್ಡಗಟ್ಟಿದ್ದಾರೆ. ಬಳಿಕ ಅವರ ಮೇಲೆ ಬರೋಬ್ಬರಿ ಐದು ಗುಂಡುಗಳನ್ನು ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಅಲಹಾಬಾದ್ (ಮಾ.20): ಉತ್ತರ ಪ್ರದೇಶದ ನೂತನ ಸಿಎಂ ಆಗಿ ಯೋಗಿ ಆದಿತ್ಯಾನಂದ ಅಧಿಕಾರಿ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.

ಬಿಎಸ್’​ಪಿ ನಾಯಕ ಮೊಹಮ್ಮದ್‌ ಶಮಿ ಎಂಬುವರನ್ನು ಕೆಲ ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ್ದಾರೆ. ಈ ಘಟನೆ ಅಲಹಾಬಾದ್‌ನ ಮಾಹು ಐಮಾ ನಗರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸರಿಸುಮಾರು 9.30ಕ್ಕೆ ಪೆಟ್ರೋಲ್‌ ಬಂಕ್‌ ಬಳಿ ಕೆಲ ಅಪರಿಚಿತ ದುಷ್ಕರ್ಮಿಗಳು ಮೊಹಮ್ಮದ್‌ ಶಮಿಯನ್ನು ಅಡ್ಡಗಟ್ಟಿದ್ದಾರೆ. ಬಳಿಕ ಅವರ ಮೇಲೆ ಬರೋಬ್ಬರಿ ಐದು ಗುಂಡುಗಳನ್ನು ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇನ್ನು ಉತ್ತರಪ್ರದೇಶದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ. ಕೆಲ ಕಿಡಿಗೇಡಿಗಳು ಹಿಂದೂ-ಮುಸ್ಲಿಂರ ನಡುವೆ ಘರ್ಷಣೆ ಉಂಟಾಗಲು ಈ ಕೃತ್ಯವೆಸಗಿರಬಹುದು ಎಂಬ ಅನುಮಾನ ಮೂಡಿದೆ.

ನಗರದಾದ್ಯಂತ ಪೊಲೀಸ್‌ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಈ ಘಟನೆ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.