ಚಾಮರಾಜನಗರ : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಈ ನಿಟ್ಟಿನಲ್ಲಿ ಇನ್ನೋರ್ವ ಮಾಜಿ ಶಾಸಕ ಬಿಜೆಪಿ ಬೆಂಬಲಿಸುವ ಸಾಧ್ಯತೆ ಇದೆ. 

"

ಕೊಳ್ಳೆಗಾಲ ಕ್ಷೇತ್ರದ BSP ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. 

ಈಗಾಗಲೇ ಮಹೇಶ್ ಜೊತೆಗೆ ಬಿಜೆಪಿ ಮುಖಂಡರಿಂದ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಕ್ಷೇತ್ರದಲ್ಲಿ ಸುದ್ದಿಯಾಗುತ್ತಿದೆ. 

ಈ ಹಿಂದೆ  ಒಳ್ಳೆಯ  ಸಚಿವ ಸ್ಥಾನ ನೀಡುತ್ತೇವೆ ಎಂದು ಮಹೇಶ್‌ಗೆ ಆಫರ್ ನೀಡಿದ್ದು, ಹೀಗಾಗಿ ಬಿಎಸ್‌ಪಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.