ಸಮ್ಮಿಶ್ರ ಸರ್ಕಾರದಿಂದ ಬಿಎಸ್‌ಪಿ ಹೊರಕ್ಕೆ | ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಿಎಸ್ಪಿ? 

ಬೆಂಗಳೂರು (ಅ. 12): ಸಮ್ಮಿಶ್ರ ಸರ್ಕಾರದಿಂದ ಹೊರಬಂದಿರುವ ಬಿಎಸ್‌ಪಿಯು ಪ್ರಸಕ್ತ ಉಪಚುನಾವಣೆಯಲ್ಲೇ ಕಾಂಗ್ರೆಸ್‌ಗೆ ತಿರುಗೇಟು ನೀಡುವ ಉದ್ದೇಶದಿಂದ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದು ಎಂಬ ವದಂತಿ ಹಬ್ಬಿದೆ.

ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್‌ ಸ್ಪರ್ಧಿಸುವ ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಬಿಎಸ್‌ಪಿ ಮುಖಂಡರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಇದುವರೆಗೆ ನಿರ್ಧಾರ ಕೈಗೊಂಡಿಲ್ಲ. ಸಾಧ್ಯಾಸಾಧ್ಯತೆಗಳ ಪರಿಶೀಲನೆ ನಡೆಸಲಾಗುತ್ತಿದೆ. ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್‌ನಿಂದ ಅಂತರ ಕಾಪಾಡಿಕೊಳ್ಳಲು ಮುಂದಾಗಿರುವುದರಿಂದ ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಜೆಡಿಎಸ್‌ ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಆ ಪಕ್ಷಕ್ಕೆ ಬೆಂಬಲ ನೀಡುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.