ಸುದ್ದಿಗಾರರ ಜತೆ ಅವರು ಮಾತನಾಡಿ, ‘ಅವರ ಪಕ್ಷದಲ್ಲಿಯೇ ಸಾಕಷ್ಟುಗೊಂದಲಗಳಿವೆ. ಅದನ್ನು ಮೊದಲು ಪರಿಹರಿಸಿಕೊಳ್ಳಲಿ, ನಮ್ಮ ಪಕ್ಷದ ಬಗ್ಗೆ ಟೀಕೆ ಮಾಡುವ ಅಗತ್ಯ ಇಲ್ಲ' ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ದೋಸ್ತಿ ಮಾಡಿಕೊಳ್ಳುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಬೆಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಿತ್ತ ನೆತ್ತಿಗೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕಿಡಿಕಾರಿದರು.

ಸುದ್ದಿಗಾರರ ಜತೆ ಅವರು ಮಾತನಾಡಿ, ‘ಅವರ ಪಕ್ಷದಲ್ಲಿಯೇ ಸಾಕಷ್ಟುಗೊಂದಲಗಳಿವೆ. ಅದನ್ನು ಮೊದಲು ಪರಿಹರಿಸಿಕೊಳ್ಳಲಿ, ನಮ್ಮ ಪಕ್ಷದ ಬಗ್ಗೆ ಟೀಕೆ ಮಾಡುವ ಅಗತ್ಯ ಇಲ್ಲ' ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ದೋಸ್ತಿ ಮಾಡಿಕೊಳ್ಳುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಕೋಮುವಾದಿ ಶಕ್ತಿಗಳ ವಿರುದ್ಧ ಜಾತ್ಯತೀತ ಶಕ್ತಿಗಳು ಒಂದಾಗಬೇಕು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿ ಉತ್ತರಪ್ರದೇಶದಲ್ಲಿ ಜಾತ್ಯತೀತ ಪಕ್ಷಗಳು ಒಂದಾದವು. ಆದರೆ, ಫಲಿತಾಂಶ ಏನಾಯಿತು ಎಂಬುದು ಗೊತ್ತಿದೆಯಲ್ಲ ಎಂದು ನುಡಿದರು.

ನಾಪತ್ತೆಯಾಗಿಲ್ಲ: ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ‘ಶೋಭಾ ನಾಪತ್ತೆಯಾಗಿದ್ದಾರೆ' ಎಂದು ದೂರು ನೀಡಿರುವುದಕ್ಕೆ ಕಿಡಿಕಾರಿದರು. ಉಪಚುನಾವಣೆಗಳ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರಿಂದ ಚಿಕ್ಕಮಗಳೂರು ಕ್ಷೇತ್ರದತ್ತ ಹೆಚ್ಚಾಗಿ ಹೋಗಲು ಸಾಧ್ಯವಾಗಿಲ್ಲ. ಆದರೆ, ಕ್ಷೇತ್ರವನ್ನು ಮರೆತಿಲ್ಲ, ಅಲ್ಲಿಗೂ ಕಾಲ, ಕಾಲಕ್ಕೆ ಭೇಟಿ ನೀಡಿದ್ದೇನೆ. ನಂಜನಗೂಡು ಉಪ ಚುನಾವಣೆ ಜವಾಬ್ದಾರಿ ನೀಡಲಾಗಿತ್ತು. ಯಾರೋ ಕಿಡಿಗೇಡಿಗಳು ನಾನು ನಾಪತ್ತೆಯಾಗಿದ್ದೇನೆ ಎಂದು ದೂರು ನೀಡಿದ್ದಾರೆ ಎಂದರು.