ಮೈಸೂರಿನ ಸುತ್ತೂರು ಮಠದಲ್ಲಿ ಹೊಸ ಬಾಂಬ್ ಸಿಡಿಸಿದ ಬಿಎಸ್'ವೈ
ಮೈಸೂರು(ಮಾ.17): ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈಗ ಮತ್ತೊಂದು ದೊಡ್ಡ ಬಾಂಬ್ ಸಿಡಿಸಿದ್ದಾರೆ.
ಹದಿನೈದು ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತು ಶೀಘ್ರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮೈಸೂರಿನ ಸುತ್ತೂರು ಮಠದಲ್ಲಿ ಹೊಸ ಬಾಂಬ್ ಸಿಡಿಸಿದ ಬಿಎಸ್'ವೈ. ಅಲ್ಲದೆ ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯಲ್ಲಿ ಸಹ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
